ADVERTISEMENT

ನೂತನ ಸಂಸತ್‌ ಭವನ ಕಟ್ಟಡದಲ್ಲಿ ಬೆಂಕಿ

ಪಿಟಿಐ
Published 21 ಮೇ 2022, 12:53 IST
Last Updated 21 ಮೇ 2022, 12:53 IST
ಸ್ಥಳದಲ್ಲಿ ಅಗ್ನಿಶಾಮಕ ದಳದ ನಿಯೋಜನೆ
ಸ್ಥಳದಲ್ಲಿ ಅಗ್ನಿಶಾಮಕ ದಳದ ನಿಯೋಜನೆ    

ನವದೆಹಲಿ: ನವದೆಹಲಿಯ ನೂತನ ಸಂಸತ್‌ ಭವನ ಕಟ್ಟಡದಲ್ಲಿ ಅಲ್ಪ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅಗ್ನಿ ಶಾಮಕ ದಳದ ಅಧಿಕಾರಿಗಳು, ‘ನೂತನ ಸಂಸತ್‌ ಕಟ್ಟಡದಲ್ಲಿ ಮಧ್ಯಾಹ್ನ ಸುಮಾರು 12.35ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕೆ ಐದು ಅಗ್ನಿ ಶಾಮಕ ವಾಹನಗಳು ಧಾವಿಸಿವೆ. ಇದು ಅಲ್ಪ ಪ್ರಮಾಣದ ಬೆಂಕಿಯಾಗಿದ್ದು, ಯಾವುದೇ ಹೆಚ್ಚಿನ ಹಾನಿ ಆಗಿಲ್ಲ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT