ADVERTISEMENT

ನವದೆಹಲಿ–ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ: ತಪ್ಪಿದ ಅನಾಹುತ

ಪಿಟಿಐ
Published 4 ಜನವರಿ 2021, 1:51 IST
Last Updated 4 ಜನವರಿ 2021, 1:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಹೈದರಾಬಾದ್‌: ನವದೆಹಲಿ–ಬೆಂಗಳೂರು ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ.

ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ನವದೆಹಲಿಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಭಾನುವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್‌ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕೊ ಪೈಲೆಟ್‌ ರೈಲು ಎಂಜಿನಲ್ಲಿ ಬೆಂಕಿ ಉರಿಯುವುದನ್ನು ಗಮನಿಸಿದ ತಕ್ಷಣವೇ ರೈಲನ್ನು ನಿಲ್ಲಿಸಿದ್ದಾರೆ. ಕೂಡಲೇ ಬೋಗಿಗಳಿಂದ ಎಂಜಿನ್‌ನನನ್ನು ಬೇರ್ಪಡಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ಎಂಜಿನ್‌ ಬದಲಾವಣೆ ಮಾಡಿಕೊಂಡು ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ತಡವಾಗಿ ಸಂಚರಿಸಿತು. ಯಾವುದೇ ಅನಾಹುತಗಳು ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.