
ಚೆನ್ನೈ ವಿಮಾನ ನಿಲ್ದಾಣ
ಚೆನ್ನೈ: ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಲಘು ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಹಾನಿ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದಾಗಿ ವಿಮಾನ ಸಂಚಾರಕ್ಕೂ ಯಾವುದೇ ತೊಂದರೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ವಿಮಾನಯಾನ ಕಚೇರಿಗಳ ಸಮೀಪದ ಟರ್ಮಿನಲ್ 2ರ ನಿರ್ಗಮನ ಪ್ರದೇಶದಲ್ಲಿ ಬೆಳಿಗ್ಗೆ 11.45ರ ಸುಮಾರಿಗೆ ಸಣ್ಣ ಬೆಂಕಿ ಅವಘಡ ಸಂಭವಿಸಿದೆ. ಆ ಜಾಗದಲ್ಲಿ ದಾಖಲೆಗಳನ್ನು ಸಂಗ್ರಹಿಸಿಡಲಾಗಿತ್ತು. ವಿಪತ್ತು ನಿರ್ವಹಣಾ ಸಮಿತಿಯು ತಕ್ಷಣ ಕ್ರಮ ಕೈಗೊಂಡಿದ್ದು, 12.45ರ ಹೊತ್ತಿಗೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಯಿತು’ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ(ಎಎಐ) ಅಧಿಕೃತ ಪ್ರಕಟಣೆ ತಿಳಿಸಿದೆ.
‘ಎಎಐ ಮತ್ತು ರಾಜ್ಯ ಅಗ್ನಿಶಾಮಕ ದಳದವರು, ಸಿಐಎಸ್‌ಎಫ್ ಮತ್ತು ಪೊಲೀಸರು ತ್ವರಿತ ಕಾರ್ಯಾಚರಣೆ ಕೈಗೊಂಡಿದ್ದರಿಂದ ಯಾವುದೇ ಹಾನಿ ಇಲ್ಲದಂತೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ಮರಳಿಸಿದರು’ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.