
ಪಿಟಿಐ
ಸಾವು (ಪ್ರಾತಿನಿಧಿಕ ಚಿತ್ರ)
ಸುಲ್ತಾನ್‌ಪುರ: 10 ವರ್ಷದ ಮೊಮ್ಮಗಳನ್ನು ಆಕೆಯ ಅಜ್ಜಿಯೇ ಬಾವಿಗೆ ಎಸೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ನೊನ್ರಾ ಎಂಬ ಹಳ್ಳಿಯಲ್ಲಿ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತೋಷ್ ನಿಷಾದ್ ಎಂಬುವವರ ಮಗಳು ರಿಯಾ ಎನ್ನುವ ಬಾಲಕಿಯನ್ನು ಆಕೆಯ ಅಜ್ಜಿ ಸುದಾಮ ಬೆಳಗ್ಗೆ ಬಾವಿಗೆ ಎಸೆದಿದ್ದರು. ಸ್ಥಳೀಯರ ಸಹಾಯದಿಂದ ಆಕೆಯನ್ನು ಹೊರತೆಗೆದು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ, ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಕೌಟುಂಬಿಕ ಕಲಹದ ಕಾರಣಕ್ಕೆ ಅಜ್ಜಿ ಮೊಮ್ಮಗಳನ್ನು ಕೊಂದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆರೋಪಿ ನಾಪತ್ತೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.