ADVERTISEMENT

ರಾಜಸ್ಥಾನ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಪಿಟಿಐ
Published 25 ಮೇ 2021, 9:49 IST
Last Updated 25 ಮೇ 2021, 9:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜೈಪುರ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ವಿಸ್ತೃತ ತನಿಖೆಗೆ ಆದೇಶಿಸಿದ್ದಾರೆ.

‘16 ವರ್ಷದ ಬಾಲಕಿಯ ಮೇಲೆಮೂವರು ಅತ್ಯಾಚಾರ ನಡೆಸಿ ಬಳಿಕ ಯುವತಿಯನ್ನು ಬಾವಿಗೆ ಎಸೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುತ್ತಿದ್ದು ಈ ಸಂಬಂಧ ಸೋಮವಾರ ಸಂತ್ರಸ್ತೆಯ ತಂದೆಯ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಇದಾದ ಬಳಿಕ ತನ್ನ ಹೇಳಿಕೆ ಬದಲಿಸಿರುವ ಬಾಲಕಿಯ ತಂದೆ ಯಾರನ್ನೂ ಆರೋಪಿಗಳು ಎಂದು ಹೆಸರಿಸಿಲ್ಲ. ಇದು ಅತ್ಯಾಚಾರ ಪ್ರಕರಣವಲ್ಲ. ಸಹೋದರಿಯೊಂದಿಗೆ ಜಗಳವಾಡಿದ ಬಳಿಕ ಬಾವಿಗೆ ಹೋಗಿ ಬಿದ್ದಿದ್ದಾಳೆ’ ಎಂದುಹೇಳಿಕೆ ನೀಡಿರುವುದಾಗಿ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.