ಗೊಂಡಾ(ಉತ್ತರ ಪ್ರದೇಶ): ಜಿಲ್ಲೆಯ ಹಳ್ಳಿಯೊಂದರಲ್ಲಿ ಹದಿನೈದು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆಗೆ ಚೂರಿಯಿಂದ ಇರಿದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಲೆಯಿಂದ ಮನೆಗೆ ಮರಳುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿನಿಯನ್ನು ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಕೃಷಿ ಜಮೀನೊಂದಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಪ್ರತಿರೋಧ ಒಡ್ಡಿದ್ದಕ್ಕಾಗಿ ಆಕೆಗೆ ಚಾಕುವಿನಿಂದ ಚುಚ್ಚಿ ಗಾಯಗೊಳಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಖಂಡೇರು ಮತ್ತು ಇತರೆ ಮೂವರ ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದವರು ಮತ್ತು ಹೆಸರಿಸಲಾದ ಆರೋಪಿಗಳ ನಡುವೆ ಹಳೆಯ ವ್ಯಾಜ್ಯವಿತ್ತು ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪಾಂಡೆ ಹೇಳಿದರು. ವೈದ್ಯಕೀಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.