ADVERTISEMENT

ಶಿಕ್ಷಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಗರ್ಭಪಾತಕ್ಕೆ ಒತ್ತಡ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 14:31 IST
Last Updated 1 ಮಾರ್ಚ್ 2020, 14:31 IST
   

ಜಷ್ಪುರ್‌: 13 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಸರ್ಕಾರಿ ಶಾಲಾ ಶಿಕ್ಷಕನೇ ಅತ್ಯಾಚಾರವೆಸಗಿದ ಘಟನೆಛತ್ತೀಸಗಡದ ಜಷ್ಪುರ್‌ ಜಿಲ್ಲೆಯಲ್ಲಿ ನಡೆದಿದೆ.

‘ವಿದ್ಯಾರ್ಥಿನಿ ಗರ್ಭಿಣಿಯಾದಾಗ ಖಾಸಗಿ ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸುವಂತೆ ಒತ್ತಡ ಹೇರಿದ ಆರೋಪವೂ ಆರೋಪಿ ರಶೀದ್‌ ಅನ್ವರ್‌ ಖಾನ್‌ ಮೇಲಿದೆ. ಬಾಲಕಿಯ ಹೆತ್ತವರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಅನ್ವರ್‌ ಪರಾರಿಯಾಗಿದ್ದು, ಆತನ ಜೊತೆಗಿದ್ದ ಸುಖ್‌ಲಾಲ್‌ ಎಂಬಾತನನ್ನು ಬಂಧಿಸಲಾಗಿದೆ. ಖಾಸಗಿ ಆಸ್ಪತ್ರೆಯ ವಿರುದ್ಧವೂ ತನಿಖೆ ನಡೆಸಲಾಗುವುದು’ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

‘ಅನ್ವರ್‌, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ನಾಲ್ಕು ಶಿಕ್ಷಕರನ್ನು ಅಮಾನತುಗೊಳಿಸಲಾಗಿದ್ದು, ಕರ್ತವ್ಯಲೋಪದಡಿ ಶಿಕ್ಷಣ ಇಲಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.