ADVERTISEMENT

ಉತ್ತರ ಪ್ರದೇಶದಲ್ಲಿ ಮತ್ತೊಂದು ಅತ್ಯಾಚಾರ: 14 ವರ್ಷದ ಬಾಲಕಿ ಮೇಲೆ ದೌರ್ಜನ್ಯ

ಏಜೆನ್ಸೀಸ್
Published 30 ಜನವರಿ 2021, 8:55 IST
Last Updated 30 ಜನವರಿ 2021, 8:55 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಲಿಯಾ(ಉತ್ತರ ಪ್ರದೇಶ): 14 ವರ್ಷದ ಬಾಲಕಿ ಮೇಲೆ ಅಂಗಡಿ ಮಾಲೀಕ ಮತ್ತು ಆತನ ಮಗ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮೂರು ತಿಂಗಳ ಹಿಂದೆ ಬಾಲಕಿ ಕೆಲವು ವಸ್ತುಗಳನ್ನು ಖರೀದಿಸಲು ಅಂಗಡಿಗೆ ಹೋಗಿದ್ದ ವೇಳೆ ಅಂಗಡಿ ಮಾಲೀಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ಈ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ತಂದೆ ದೂರು ದಾಖಲಿಸಿದ್ದಾರೆ.

ಘಟನೆ ನಡೆದ ಒಂದು ವಾರದ ಬಳಿಕ ಬಾಲಕಿ ಅದೇ ಅಂಗಡಿಗೆ ಹೋಗಿದ್ದಳು. ಆಗ ಅಂಗಡಿ ಮಾಲೀಕನ ಮಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು, ವಿಷಯ ಬಹಿರಂಗಪಡಿಸಿದರೆ ಕುಟುಂಬಸ್ಥರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆ ತಂದೆ ತಿಳಿಸಿದ್ದಾರೆ.

ADVERTISEMENT

ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಬಳಿ ಕರೆದೊಯ್ಯಲಾಗಿತ್ತು. ತಪಾಸಣೆ ವೇಳೆ ಬಾಲಕಿ ಮೂರು ತಿಂಗಳ ಗರ್ಭಿಣಿಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಸದ್ಯ ಇಬ್ಬರು ಆರೋಪಿಗಳ ವಿರುದ್ಧ ಎಎಫ್‌ಆರ್‌ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸ್‌ ವರಿಷ್ಠಾಧಿಕಾರಿ ವಿಪಿನ್‌ ತಾಡಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.