ADVERTISEMENT

ಬಾಲಕಿ ಅತ್ಯಾಚಾರ: ಸಾಮಾಜಿಕ ಮಾಧ್ಯಮದಲ್ಲಿ ಚಿತ್ರ ಹಂಚಿಕೆ

ಪಿಟಿಐ
Published 23 ಫೆಬ್ರುವರಿ 2019, 18:25 IST
Last Updated 23 ಫೆಬ್ರುವರಿ 2019, 18:25 IST

ಬೇಗುಸರೈ (ಬಿಹಾರ): ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳು ಕೃತ್ಯದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವಾರದ ಹಿಂದೆ ಈ ಕೃತ್ಯ ನಡೆದಿದ್ದು, ಸಾಮಾಜಿಕ ಮಾಧ್ಯಮದಲ್ಲಿ ದುಷ್ಕೃತ್ಯದ ಚಿತ್ರಗಳನ್ನು ಆರೋಪಿಗಳು ಬಯಲು ಮಾಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

‘ಮೂವರು ವ್ಯಕ್ತಿಗಳು ಬಾಲಕಿ ಮೇಲೆ ಫೆ. 11 ರಂದು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಇನ್ನುಳಿದ ಇಬ್ಬರು ಮೊಬೈಲ್‌ನಲ್ಲಿ ಚಿತ್ರಗಳನ್ನು ತೆಗೆದಿದ್ದಾರೆ’ ಎಂದು ಮನ್ಸೂರ್‌ ಚಾಕ್‌ ಪೊಲೀಸ್‌ ಠಾಣೆಯ ಅಧಿಕಾರಿ ಅರವಿಂ‌ದ್‌ ಕುಮಾರ್‌ ತಿಳಿಸಿದ್ದಾರೆ.

ADVERTISEMENT

‘ಅತ್ಯಾಚಾರದ ಕುರಿತು ಬಾಯಿಬಿಟ್ಟರೆ ಕುಟುಂಬದ ಸದಸ್ಯರನ್ನು ಕೊಲ್ಲುವುದಾಗಿ ದುಷ್ಕರ್ಮಿಗಳು ಬಾಲಕಿಗೆ ಬೆದರಿಕೆ ಒಡ್ಡಿದ್ದರು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.