ADVERTISEMENT

ದೆಹಲಿ | 5 ವರ್ಷದ ಬಾಲಕಿ ಮೇಲೆ 14 ವರ್ಷದ ಬಾಲಕನಿಂದ ಅತ್ಯಾಚಾರ

ಪಿಟಿಐ
Published 31 ಆಗಸ್ಟ್ 2024, 13:11 IST
Last Updated 31 ಆಗಸ್ಟ್ 2024, 13:11 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನವದೆಹಲಿ: 5 ವರ್ಷದ ಹೆಣ್ಣುಮಗುವಿನ ಮೇಲೆ 14 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಘಟನೆ ನೈಋತ್ಯ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದರು.

ಗುರುವಾರ ಮಧ್ಯಾಹ್ನ ಮಗುವಿನ ಪೋಷಕರು ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕೃತ್ಯ ಎಸಗಲಾಗಿದೆ. ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಪೋಷಕರ ಸಮ್ಮುಖದಲ್ಲಿ ಸಮಾಲೋಚನೆ ನಡೆಸಲಾಗಿದೆ ಎಂದು ತಿಳಿಸಿದರು.

ADVERTISEMENT

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 65 (2) ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಾನೂನಿನ ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಬಾಲಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣದ ತನಿಖೆಯು ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.