ADVERTISEMENT

ಉತ್ತರಪ್ರದೇಶದಲ್ಲಿ ಮೂವರು ಯುವಕರಿಂದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ
Published 31 ಜುಲೈ 2020, 7:52 IST
Last Updated 31 ಜುಲೈ 2020, 7:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಜಾಫ್ಫರನಗರ:15 ವರ್ಷದ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಮುಜಾಫ್ಫರನಗರದಲ್ಲಿ ನಡೆದಿದೆ.

ಈ ಬಗ್ಗೆ ಅಪ್ರಾಪ್ತೆಯ ಕುಟುಂಬದವರು ದೂರು ದಾಖಲಿಸಿ‌ದ್ದು, ಗುರುವಾರಬಾಲಕಿ ಕಸ ಎಸೆಯಲೆಂದು ಮನೆಯಿಂದ ಹೊರ ಹೋಗಿದ್ದಳು. ಈ ವೇಳೆ ಆರೋಪಿಗಳು ಆಕೆಯನ್ನು ಅಪಹರಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಹತ್ತಿರದಲ್ಲೇ ಇದ್ದ ಕಾಡಿಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಇದನ್ನು ವಿಡಿಯೊ ರೆಕಾರ್ಡ್ ಕೂಡ‌ ಮಾಡಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದರು.

ADVERTISEMENT

‘ಆರೋಪಿಗಳಿಗಾಗಿಶೋಧ ಕಾರ್ಯ ಮುಂದುವರಿದಿದ್ದು, ಆದಷ್ಟು ಬೇಗ ಅವರನ್ನು ಬಂಧಿಸುತ್ತೇವೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.