ADVERTISEMENT

ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 12:45 IST
Last Updated 3 ಜುಲೈ 2022, 12:45 IST

ಮೌ (ಉತ್ತರ ಪ್ರದೇಶ) (ಪಿಟಿಐ): ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಘೋಸಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಸಹೋದರಿಯರ ಮೇಲೆ ಐವರು ಅತ್ಯಾಚಾರ ನಡೆಸಿ, ವಿಷಯ ಬಹಿರಂಗ ಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

’ಬಹಿರ್ದೆಸೆಗೆ ತೆರಳಿದ್ದ ಸಂದರ್ಭದಲ್ಲಿ ಎಳದೊಯ್ದು ಅತ್ಯಾಚಾರವೆಸಗಿದ್ದಾರೆ’ ಎಂದು ಸಂತ್ರಸ್ತೆ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.ಆರೋಪಿಗಳ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.