ADVERTISEMENT

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2019, 12:24 IST
Last Updated 10 ನವೆಂಬರ್ 2019, 12:24 IST
   

ಗುರುಗ್ರಾಮ: ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 22 ವರ್ಷದ ಆರೋಪಿಯನ್ನು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ತಿಂಗಳಿಂದಲೂ ಆರೋಪಿ 15 ವರ್ಷದಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆ ನೋವು ಎಂದು ಆಸ್ಪತ್ರೆಗೆದಾಖಲಾದ ವೇಳೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ಅತ್ಯಾಚಾರ ಸಂತ್ರಸ್ತೆ ಗರ್ಭಿಣಿಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಆರೋಪಿಯು ಜುಲೈನಲ್ಲಿ ಭೇಟಿಯಾಗಿದ್ದ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಆರೋಪಿ ಬಾಲಕಿಯನ್ನು ಭೇಟಿ ಮಾಡಿದ್ದಂದಿನಿಂದಲೂ ನಿರಂತರ ಅತ್ಯಾಚಾರ ಎಸಗಿದ್ದಾನೆ. ಆರೋಪಿ ವಿರುದ್ಧಐಪಿಸಿ ಸೆಕ್ಷನ್ 506 ಮತ್ತು ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಕರಣ್ ಗೋಯಲ್ ತಿಳಿಸಿದ್ದಾರೆ.

ಸದ್ಯ ಬಾಲಕಿಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ಒಂದು ವೇಳೆ ಬಾಲಕಿ ವೈದ್ಯಕೀಯವಾಗಿ ಫಿಟ್ ಎಂದು ಅನ್ನಿಸಿದರೆ ಗರ್ಭಪಾತ ಮಾಡುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.