ADVERTISEMENT

ಪಾಕಿಸ್ತಾನ, ಅಫ್ಗಾನಿಸ್ತಾನದ 3,117 ಮಂದಿಗೆ ಭಾರತೀಯ ಪೌರತ್ವ: ಕೇಂದ್ರ

ಪಿಟಿಐ
Published 22 ಡಿಸೆಂಬರ್ 2021, 15:29 IST
Last Updated 22 ಡಿಸೆಂಬರ್ 2021, 15:29 IST
ನಿತ್ಯಾನಂದ ರಾಯ್‌
ನಿತ್ಯಾನಂದ ರಾಯ್‌   

ನವದೆಹಲಿ: ಕಳೆದ ನಾಲ್ಕು ವರ್ಷಗಳಲ್ಲಿ ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದಿಂದ 8,244 ಮುಸ್ಲಿಮೇತರರು ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 3,117 ಮಂದಿಗೆ ಪೌರತ್ವ ನೀಡಲಾಗಿದೆ’ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್‌ ರಾಜ್ಯಸಭೆಗೆ ತಿಳಿಸಿದರು.

‘2018ರಿಂದ 2021ರ ಅವಧಿಯಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನ ಮೂಲದ ಹಿಂದೂ, ಸಿಖ್‌, ಜೈನ್‌ ಮತ್ತು ಕ್ರೈಸ್ತ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ8,244 ಮಂದಿ ಭಾರತೀಯ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದರು’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT