ADVERTISEMENT

ಭೂಗತ ಪಾತಕಿ ಮಿರ್ಚಿ ಪ್ರಕರಣ: ₹ 600 ಕೋಟಿ ಸ್ವತ್ತು ವಶಕ್ಕೆ ಪಡೆದ ಇ.ಡಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2019, 16:22 IST
Last Updated 11 ಡಿಸೆಂಬರ್ 2019, 16:22 IST

ನವದೆಹಲಿ: ಭೂಗತ ಪಾತಕಿ ಇಕ್ಬಾಲ್ ಮಿರ್ಚಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ₹ 600 ಕೋಟಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಹೇಳಿದೆ.

ಸೋಮವಾರವಷ್ಟೆ ಪ್ರಕರಣ ಸಂಬಂಧ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಇ.ಡಿ ಆರೋಪಪಟ್ಟಿ ಸಲ್ಲಿಸಿತ್ತು.

‘ಮಿರ್ಚಿ ತನ್ನ ಕುಟುಂಬ ಸದಸ್ಯರ ಹೆಸರಿನಲ್ಲಿ ಈ ಸ್ವತ್ತುಗಳನ್ನು ಖರೀದಿಸಿದ್ದ. ಈ ಸಂಬಂಧ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಲ್ಲಿಯವರೆಗೆ ನಾಲ್ವರನ್ನು ಬಂಧಿಸಲಾಗಿದೆ. 2013ರಲ್ಲಿ ಲಂಡನ್‌ನಲ್ಲಿ ಮೃತಪಟ್ಟಮಿರ್ಚಿ, ದಾವೂದ್ ಇಬ್ರಾಹಿಂ ಸಹಚರನಾಗಿದ್ದ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಈತ ದೇಶ ವಿದೇಶಗಳಲ್ಲಿ ಸಾಕಷ್ಟು ಸ್ಥಿರಾಸ್ತಿ ಖರೀದಿಸಿದ್ದ’ ಎಂದು ಇ.ಡಿ ತಿಳಿಸಿದೆ.

ADVERTISEMENT

ಮುಂಬೈ ಪೊಲೀಸರು ದಾಖಲಿಸಿಕೊಂಡ ವಿವಿಧ ಎಫ್‌ಐಆರ್‌ಗಳನ್ನು ಆಧರಿಸಿ ಇ.ಡಿ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.