ADVERTISEMENT

ಎನ್‌ಐಎ ವಿಚಾರಣೆಗೆ ಫಾರೂಕ್‌ ಹಾಜರ್‌

ಭಯೋತ್ಪಾದಕರಿಗೆ ಆರ್ಥಿಕ ನೆರವು ಪ್ರಕರಣ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 20:20 IST
Last Updated 8 ಏಪ್ರಿಲ್ 2019, 20:20 IST

ನವದೆಹಲಿ: ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತ್ಯೇಕತಾವಾದಿ ಮುಖಂಡ ಮಿರ್ವಾಯಿಜ್ ಉಮರ್ ಫಾರೂಕ್ ಸೋಮವಾರ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮುಂದೆ ವಿಚಾರಣೆಗೆ ಹಾಜರಾದರು.

ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಮರ್‌ ಫಾರೂಕ್‌ ಅವರನ್ನು ಬಿಗಿ ಭದ್ರತೆಯಲ್ಲಿ ಎನ್ಐಎ ಕಚೇರಿಗೆ ಕರೆತರಲಾಯಿತು. ಹುರಿಯತ್‌ ಸಂಘಟನೆ ಮುಖಂಡರಾದ ಅಬ್ದುಲ್‌ ಗನಿ ಭಟ್‌, ಬಿಲಾಲ್‌ ಲೋಲ್‌, ಮೌಲಾನ ಅಬ್ಬಾಸ್‌ ಅನ್ಸಾರಿ ಅವರು ಫಾರೂಕ್‌ ಜೊತೆಗಿದ್ದರು.

2004ರಲ್ಲಿ ಈ ಸಂಘಟನೆಯ ಮುಖಂಡರು ಕಾಶ್ಮೀರದ ಸಮಸ್ಯೆಗಳ ಕುರಿತು ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತುಗೃಹಸಚಿವ ಎಲ್‌.ಕೆ. ಅಡ್ವಾಣಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.

ADVERTISEMENT

ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವಿನ ಜೊತೆಗೆ ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ, ಸರ್ಕಾರಿ ಸ್ವತ್ತುಗಳನ್ನು ಹಾನಿಗೊಳಿಸುವುದುಕಾಶ್ಮೀರದಲ್ಲಿ ಸಾಮಾನ್ಯವಾಗಿದೆ. ಈ ಕೃತ್ಯಗಳ ಹಿಂದಿನ ಸಂಚುಕೋರರನ್ನು ಗುರುತಿಸಲುಎನ್‌ಐಎ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.