ADVERTISEMENT

ನ್ಯಾ.ಚಂದ್ರಚೂಡ್‌ ಪ್ರಮಾಣ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2022, 14:39 IST
Last Updated 2 ನವೆಂಬರ್ 2022, 14:39 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ‘ಮುಖ್ಯನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ತಪ್ಪು ಕಲ್ಪನೆಯಿಂದ ಕೂಡಿದೆ’ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್‌, ಅರ್ಜಿಯನ್ನು ಬುಧವಾರ ವಜಾಗೊಳಿಸಿತು.

ಮುಖ್ಯನ್ಯಾಯಮೂರ್ತಿ ಯು.ಯು.ಲಲಿತ್‌, ನ್ಯಾಯಮೂರ್ತಿಗಳಾದ ಎಸ್‌.ರವೀಂದ್ರ ಭಟ್‌ ಹಾಗೂ ಬೇಲಾ ಎಂ.ತ್ರಿವೇದಿ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು. ‘ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸೂಕ್ತ ಕಾರಣಗಳು ಕಾಣುತ್ತಿಲ್ಲ’ ಎಂದು ನ್ಯಾಯಪೀಠ ಹೇಳಿತು.

ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಭಾರತದ 50ನೇ ಮುಖ್ಯನ್ಯಾಯಮೂರ್ತಿಯಾಗಿ ಇದೇ 9ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ADVERTISEMENT

ರಶೀದ್‌ ಖಾನ್‌ ಪಠಾಣ್‌ ಎಂಬುವವರು ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಎಂ.ಎ.ಶೇಖ್‌, ‘ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಹಲವಾರು ಅಕ್ರಮಗಳನ್ನು ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಕೋವಿಡ್‌ ಲಸಿಕೆಯನ್ನು ತೆಗೆದುಕೊಳ್ಳುವಂತೆ ಅವರು ಜನರ ಮೇಲೆ ಒತ್ತಡ ಹೇರಿದ್ದ ಆರೋಪವೂ ಅವರ ಮೇಲಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.