ADVERTISEMENT

ಇಂದಿರಾಗಾಂಧಿ ಪ್ರತಿಮೆಗೆ ಬುರ್ಖಾ ತೊಡಿಸಿದ ದುಷ್ಕರ್ಮಿಗಳು, ಕಾಂಗ್ರೆಸ್ ಪ್ರತಿಭಟನೆ

ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಕೃತ್ಯ

ಏಜೆನ್ಸೀಸ್
Published 3 ಜೂನ್ 2019, 14:08 IST
Last Updated 3 ಜೂನ್ 2019, 14:08 IST
ಇಂದಿರಾಗಾಂಧಿ
ಇಂದಿರಾಗಾಂಧಿ   

ಲಖೀಂಪುರ್ ಖೇರಿ (ಉತ್ತರ ಪ್ರದೇಶ):ಇಲ್ಲಿನ ಗೋಲಾ ಪ್ರದೇಶದಲ್ಲಿಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪ್ರತಿಮೆಗೆ ಅಪರಿಚಿತರು ಬುರ್ಖಾ ತೊಡಿಸಿದ್ದು ವಿವಾದಕ್ಕೆ ಗುರಿಯಾಗಿದೆ.

ಕೃತ್ಯದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಬೀದಿಗಳಿದು ಪ್ರತಿಭಟನೆ ನಡೆಸಿದ್ದು, ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಜಿಲ್ಲೆಯ ಹಿರಿಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕಾಗಮಿಸಿದ್ದು, ಬುರ್ಖಾ ತೆರವುಗೊಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ADVERTISEMENT

ನಡೆದಿದ್ದೇನು?:ಮುಂಜಾವ ವಾಕಿಂಗ್ ತೆರಳುತ್ತಿದ್ದ ಕೆಲವರಿಗೆ ಇಂದಿರಾ ಅವರ ಪ್ರತಿಮೆಗೆ ಬುರ್ಖಾ ಧರಿಸಿರುವುದು ಕಂಡುಬಂದಿದೆ. ಈ ವಿಷಯವನ್ನು ಇತರರ ಜತೆ ಹಂಚಿಕೊಂಡಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರು ಸ್ಥಳಕ್ಕೆ ಬಂದು ಪ್ರತಿಭಟನೆ ಆರಂಭಿಸಿದ್ದಾರೆ.

‘ಕೆಲವು ಕಿಡಿಗೇಡಿಗಳು ಶಾಂತಿ ಕದಡಲು ಈ ಕೃತ್ಯ ಎಸಗಿರುವುದು ಸ್ಪಷ್ಟ. ಅಂತಹವರನ್ನು ಗುರುತಿಸಿ ಅವರ ವಿರುದ್ಧ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಲಿದ್ದೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.