

ಶಿಮ್ಲಾ: ಬೆಂಗಳೂರು ಮೂಲದ ಶಿಖರಾರೋಹಿ ಸತ್ಯನಾರಾಯಣ ಅವರ ಶವ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಭಾಭಾ ಕಣಿವೆಯಲ್ಲಿ ಮಂಗಳವಾರ ಪತ್ತೆಯಾಗಿದೆ.
ರಸ್ತೆ ಅಪಘಾತದಲ್ಲಿ ಸತ್ಯನಾರಾಯಣ (46) ಮೃತಪಟ್ಟಿದ್ದು, ಅವರ ವಾಹನ ಚಾಲಕ ರಮೇಶ್‌ಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸತ್ಯನಾರಾಯಣ ಅವರು ಹಿಮಾಚಲ ಪ್ರದೇಶದ ವಾಂಗ್ಟುವಿನಿಂದ ಜುಲೈ 25ರಿಂದ ನಾಪತ್ತೆಯಾಗಿದ್ದರು. ಅವರ ಪತ್ತೆಗಾಗಿ ಇಂಡೊ–ಟಿಬೆಟನ್ ಗಡಿ ಪೊಲೀಸರು ಶೋಧ ಕಾರ್ಯ ಕೈಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.