ಮಿಜೋರಾಂ ರಾಜಧಾನಿ ಐಜ್ವಾಲ್‌ಗೆ ಸಂಪರ್ಕಿಸುವ ರೈಲು ಮಾರ್ಗ ಕಣಿವೆಗಳ ನಡುವೆ ಅತ್ಯಧಿಕ ಸೇತುವೆ ಮತ್ತು ಸುರಂಗಗಳೊಂದಿಗೆ ಸಿದ್ಧಗೊಂಡಿದ್ದು, ಉದ್ಘಾಟನೆಗಾಗಿ ಕಾಯುತ್ತಿದೆ. ಈ ಐಜ್ವಾಲ್ ಕಡಿದಾದ ಬೆಟ್ಟಗಳ ಮೇಲೆ ಇರುವುದರಿಂದ ರೈಲು ಸಂಪರ್ಕ ಕಾಮಗಾರಿ ನಿಧಾನವಾಗಿ ನಡೆದಿದ್ದು, 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. ಇದು ಒಟ್ಟು 51.38 ಕಿ.ಮೀ. ಉದ್ದದ ಮಾರ್ಗ. ಇದರಲ್ಲಿ 48 ಸುರಂಗ ಮಾರ್ಗಗಳಿದ್ದು, 55 ದೊಡ್ಡ ಸೇತುವೆ, 88 ಸಣ್ಣ ಸೇತುವೆಗಳು ಇವೆ. ಒಟ್ಟು 8,071ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮಾರ್ಗದಲ್ಲಿ ರೈಲುಗಳು ಗಂಟೆಗೆ 100 ಕಿ.ಮೀ. ವೇಗದಲ್ಲಿ ಸಾಗಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.