ADVERTISEMENT

ಮಿಜೋರಾಂನಲ್ಲಿ ವ್ಯಕ್ತಿಗೆ ಕೋವಿಡ್–19 ದೃಢ: ಈಶಾನ್ಯ ರಾಜ್ಯಗಳಲ್ಲಿ ಎರಡನೇ ಪ್ರಕರಣ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2020, 8:53 IST
Last Updated 25 ಮಾರ್ಚ್ 2020, 8:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಆಯಿಜೋಲ್: ನೆದರ್ಲೆಂಡ್ ರಾಜಧಾನಿ ಆ್ಯಮ್‌ಸ್ಟರ್‌ಡ್ಯಾಂನಿಂದ ಬಂದ 50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಕೊರನಾ ವೈರಸ್ ಸೋಂಕು (ಕೋವಿಡ್–19) ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಈಶಾನ್ಯ ರಾಜ್ಯದಲ್ಲಿ ಎರಡನೇ ಪ್ರಕರಣ ದಾಖಲಾದಂತಾಗಿದೆ.

ಮಾರ್ಚ್ 16ರಂದು ಅವರು ವಿದೇಶದಿಂದ ಬಂದಿದ್ದರು. ಅವರ ಗಂಟಲಿನ ದ್ರವದ ಮಾದರಿಯನ್ನು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಿಕೊಡಲಾಗಿತ್ತು. ಅದು ಪಾಸಿಟಿವು ಆಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸದ್ಯ ಅವರನ್ನು ರಾಜ್ಯ ರಾಜಧಾನಿ ಆಯಿಜೋಲ್‌ನ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳ ಪತತ್ತೆಹಚ್ಚಲಾಗುತ್ತಿದ್ದು, ಹೋಮ್ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ.

ADVERTISEMENT

ಮಣಿಪುರದ 23 ವರ್ಷ ವಯಸ್ಸಿನ ಯುವತಿಗೆ ಕೋವಿಡ್ ತಗುಲಿರುವುದು ಮಂಗಳವಾರ ಸಂಜೆಯಷ್ಟೇ ದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.