
ನವದೆಹಲಿ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಪತ್ರಕರ್ತೆ ಪ್ರಿಯಾ ರಮಣಿ ಅವರನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಕೇಂದ್ರದ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮುಂದಿನ ವರ್ಷ ಮೇ ಬದಲಾಗಿ ಮಾರ್ಚ್‌ನಲ್ಲಿಯೇ ವಿಚಾರಣೆ ನಡೆಸಲಿದೆ.
ನ್ಯಾಯಮೂರ್ತಿ ರವೀಂದ್ರ ದುಡೇಜಾ ಅವರು ಮುಂಚಿತವಾಗಿ ಅಂದರೆ ಮಾರ್ಚ್ 16ರಂದೇ ಅರ್ಜಿ ವಿಚಾರಣೆ ನಡೆಸಲು ಸಮ್ಮತಿಸಿದರು. ಇದಕ್ಕೂ ಮುನ್ನ ಮೇ 7ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು.
ಅಕ್ಬರ್ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ‘ಮೀಟೂ’ ಅಭಿಯಾನದ ಸಂದರ್ಭದಲ್ಲಿ 2018ರಲ್ಲಿ ಪ್ರಿಯಾ ಹೇಳಿದ್ದರು. ಈ ಹೇಳಿಕೆಯ ವಿರುದ್ಧ ಅಕ್ಬರ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 2021ರ ಫೆಬ್ರುವರಿ 17ರಂದು ವಿಚಾರಣಾ ನ್ಯಾಯಾಲಯವು ರಮಣಿ ಅವರನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಅಕ್ಬರ್ ಅವರು ಇದನ್ನು ಪ್ರಸ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.