ADVERTISEMENT

ವ್ಯಕ್ತಿಯನ್ನು ಹೊತ್ತು ಸಾಗಿದ ಮಹಿಳಾ ಇನ್‌ಸ್ಪೆಕ್ಟರ್‌ಗೆ ಸ್ಟಾಲಿನ್ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ನವೆಂಬರ್ 2021, 6:32 IST
Last Updated 12 ನವೆಂಬರ್ 2021, 6:32 IST
ಮಹಿಳಾ ಇನ್‌ಸ್ಪೆಕ್ಟರ್‌ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅಭಿನಂದಿಸಿದರು. –ಟ್ವಿಟರ್ ಚಿತ್ರ
ಮಹಿಳಾ ಇನ್‌ಸ್ಪೆಕ್ಟರ್‌ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅಭಿನಂದಿಸಿದರು. –ಟ್ವಿಟರ್ ಚಿತ್ರ    

ಚೆನ್ನೈ: ಮಳೆ ಸಂಬಂಧಿತ ಅವಘಡದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಹೆಗಲ ಮೇಲೆ ಹೊತ್ತು ಸಾಗಿದ್ದ ಮಹಿಳಾ ಇನ್‌ಸ್ಪೆಕ್ಟರ್‌ ರಾಜೇಶ್ವರಿ ಅವರನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅಭಿನಂದಿಸಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ತಮಿಳುನಾಡಿನಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಇದರಿಂದಾಗಿ ಚೆನ್ನೈ ಮಹಾನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಇನ್‌ಸ್ಪೆಕ್ಟರ್‌ ರಾಜೇಶ್ವರಿ ಅವರು ಖುದ್ದು ತಾವೇ ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.