
ಚೆನ್ನೈ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಆಳವಾಗಿ ಬೇರೂರಿವ ಜಾತಿ ತಾರತಮ್ಯ ತಡೆಗೆ ವಿಳಂಬವಾಗಿ ಆದರೂ ಯುಜಿಸಿ ಸ್ವಾಗತಾರ್ಹ ಹೆಜ್ಜೆಯಿಟ್ಟಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಹೇಳಿದ್ದಾರೆ.
‘ಈ ನಿಯಮಗಳನ್ನು ಇನ್ನಷ್ಟು ಬಲಪಡಿಸಿ ರಚನಾತ್ಮಕ ಅಂತರವನ್ನು ತಗ್ಗಿಸಲು ಪರಿಷ್ಕರಿಸಬೇಕು. ಅಲ್ಲದೆ ನಿಜವಾದ ಹೊಣೆಗಾರಿಕೆಯನ್ನು ನಿಗದಿಪಡಿಸಿ ಜಾರಿಗೊಳಿಸಬೇಕು’ ಎಂದು ಅವರು ‘ಎಕ್ಸ್’ನಲ್ಲಿ ಒತ್ತಾಯಿಸಿದ್ದಾರೆ.
‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷವಾಗಿ ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಆತ್ಮಹತ್ಯೆ ಹೆಚ್ಚಾಗಿದೆ.
ದಕ್ಷಿಣ ಭಾರತ ಕಾಶ್ಮೀರದ ವಿದ್ಯಾರ್ಥಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಕಿರುಕುಳ ನೀಡಲಾಗುತ್ತಿದೆ. ಇಂಥ ಸಂದರ್ಭದಲ್ಲಿ ಈ ಸುಧಾರಣೆ ಅನಿವಾರ್ಯ’ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.