
ಪಿಟಿಐ
ನವದೆಹಲಿ: ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಕೃತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುವ ಬಗ್ಗೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಶೀರ್ಷಿಕೆಯ ಕೃತಿಯ ಮುದ್ರಣ ಪೂರ್ವ ಪ್ರತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೆ ಸಾಮಾಜಿಕ ಜಾಲತಾಣಗಳು ಮತ್ತು ಆನ್‌ಲೈನ್ ಸುದ್ದಿ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ದೆಹಲಿ ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.