ADVERTISEMENT

ನಿರ್ಭಯಾ ಅತ್ಯಾಚಾರ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ಏಜೆನ್ಸೀಸ್
Published 17 ಜನವರಿ 2020, 7:22 IST
Last Updated 17 ಜನವರಿ 2020, 7:22 IST
ರಾಷ್ಟ್ರಪತಿ ರಾಮನಾಥ ಕೋವಿಂದ್
ರಾಷ್ಟ್ರಪತಿ ರಾಮನಾಥ ಕೋವಿಂದ್   

ನವದೆಹಲಿ:ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ ತಿರಸ್ಕರಿಸಿದ್ದಾರೆ.

ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ಗೃಹ ಸಚಿವಾಲಯವು ರಾಷ್ಟ್ರಪತಿಗಳಿಗೆಶಿಫಾರಸು ಮಾಡಿತ್ತು. ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ಗುರುವಾರ ತಿರಸ್ಕರಿಸಿತ್ತು. ಬಳಿಕ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

‘ಅರ್ಜಿ ತಿರಸ್ಕರಿಸುವಂತೆ ದೆಹಲಿ ರಾಜ್ಯಪಾಲರು ಮಾಡಿದ್ದ ಶಿಫಾರಸನ್ನೇ ಗೃಹ ಸಚಿವಾಲಯ ಎತ್ತಿಹಿಡಿದಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದರು.

ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ‘ನಿರ್ಭಯಾ’ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಈ ಹಿಂದೆ ಘೋಷಿಸಿದ್ದಂತೆ ಜ.22ರಂದು ಮರಣದಂಡನೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ಜ.15ರಂದು ತಿಳಿಸಿತ್ತು. ಈ ಮಧ್ಯೆ,ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ನಿಗದಿಯಾಗಿರುವ ಮರಣದಂಡನೆ ಪ್ರಕ್ರಿಯೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ತಿಹಾರ್‌ ಜೈಲು ಅಧಿಕಾರಿಗಳಿಗೆ ದೆಹಲಿ ಕೋರ್ಟ್‌ ಗುರುವಾರ ನಿರ್ದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.