ಕಮಲ್ ಹಾಸನ್–ಪಿಟಿಐ ಚಿತ್ರ
ಚೆನ್ನೈ: ‘ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ’ ಎಂದು ನಟ ಕಮಲ್ ಹಾಸನ್ ಅವರ ಹೇಳಿಕೆಯನ್ನು ಬೆಂಬಲಿಸಿ ಅವರ ಮಕ್ಕಳ್ ನೀಧಿ ಮಯ್ಯಂ (ಎಂಎನ್‌ಎಂ) ಪಕ್ಷದ ಕಾರ್ಯಕರ್ತರು ರಾಜ್ಯದಾದ್ಯಂತ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ‘ಸತ್ಯ ಹೇಳಿದ್ದಕ್ಕೆ ಯಾವುದೇ ಕ್ಷಮೆ ಕೇಳುವ ಅಗತ್ಯವಿಲ್ಲ’ ಎಂದು ಸಮರ್ಥಿಸಿಕೊಂಡಿದ್ದಾರೆ.
‘ನಮ್ಮ ನಾಯಕನ ಜೊತೆಗೆ ಗಟ್ಟಿಯಾಗಿ ನಿಲ್ಲುತ್ತೇವೆ. ಸತ್ಯವನ್ನು ಹೇಳಿದ್ದಕ್ಕೆ ಯಾವುದೇ ಕ್ಷಮೆ ಕೇಳಬೇಕಾದ ಅಗತ್ಯವಿಲ್ಲ’ ಎಂದು ಪಕ್ಷದ ಪದಾಧಿಕಾರಿಗಳು ಕೂಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.