
ಪಿಟಿಐ
ನವದೆಹಲಿ: ಗುಂಪು ಹತ್ಯೆಯ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ಕೊಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಜಮಿಯತ್ ಉಲಮಾ–ಇ– ಹಿಂದ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ವಿಜಯ್ ಬಿಷ್ಣೋಯಿ ಅವರಿದ್ದ ಪೀಠವು ಅಲಹಾಬಾದ್ ಹೈಕೋರ್ಟ್‌ನ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿತು.
ತೆಹಸೀನ್ ಪೂನವಾಲಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ವಿಸ್ತೃತ ನಿರ್ದೇಶನ ನೀಡುವಂತೆ ಜಮಿಯತ್ ಉಲಮಾ–ಇ– ಹಿಂದ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯಲ್ಲಿ ಕೋರಲಾಗಿತ್ತು.
ಸುಪ್ರೀಂ ಕೋರ್ಟ್‌ನ ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.