ADVERTISEMENT

ರಜೌರಿ– ಪೂಂಛ್‌: ಮೊಬೈಲ್ ಇಂಟರ್‌ನೆಟ್‌ ಪುನರ್‌ ಸ್ಥಾಪನೆ

ಪಿಟಿಐ
Published 29 ಡಿಸೆಂಬರ್ 2023, 15:06 IST
Last Updated 29 ಡಿಸೆಂಬರ್ 2023, 15:06 IST
.
.   

ಜಮ್ಮು: ‘ಸೇನಾ ವಾಹನಗಳ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ– ಪೂಂಛ್‌ ಜಿಲ್ಲೆಗಳಲ್ಲಿ ವಾರದ ಹಿಂದೆ ಸ್ಥಗಿತಗೊಳಿಸಲಾಗಿದ್ದ ಮೊಬೈಲ್‌ ಇಂಟರ್‌ನೆಟ್‌ ಸೇವೆಯನ್ನು ಪುನರ್‌ಸ್ಥಾಪಿಸಲಾಗಿದೆ’ ಎಂದು ಜಮ್ಮು  ವಿಭಾಗಾಧಿಕಾರಿ ರಮೇಶ್‌ ಕುಮಾರ್‌ ಹೇಳಿದ್ದಾರೆ.

‘ವದಂತಿ ಹರಡುವಿಕೆ ತಡೆಯುವ ಮತ್ತು ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಶುಕ್ರವಾರದಂದು ಮೊಬೈಲ್‌ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಈಗ ಅದನ್ನು ಪುನರ್‌ಸ್ಥಾಪಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT