ADVERTISEMENT

ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ನೊಂದ ಯುವತಿ 11ನೇ ಮಹಡಿಯಿಂದ ನೆಗೆದು ಆತ್ಮಹತ್ಯೆ

ಪಿಟಿಐ
Published 30 ಏಪ್ರಿಲ್ 2025, 9:17 IST
Last Updated 30 ಏಪ್ರಿಲ್ 2025, 9:17 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಠಾಣೆ: ಅತಿಯಾದ ಮೊಬೈಲ್ ಬಳಕೆಗೆ ಮನೆಯವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ನೊಂದ 20 ವರ್ಷದ ಯುವತಿ, 11ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಮಹಾರಾಷ್ಟ್ರದ ಠಾಣೆಯಲ್ಲಿ ಈ ಘಟನೆ ನಡೆದಿದ್ದು, ಯುವತಿಯನ್ನು ಸಮೀಕ್ಷಾ ನಾರಾಯಣ ವಡ್ಡಿ ಎಂದು ಗುರುತಿಸಲಾಗಿದೆ.

‘ಯುವತಿ ರಾತ್ರಿ ವೇಳೆಯಲ್ಲಿ ಮೊಬೈಲ್‌ನಲ್ಲಿ ಅತಿಯಾಗಿ ಮಾತನಾಡುತ್ತಿದ್ದರು. ಇದಕ್ಕೆ ಅವರ ಮನೆಯವರು ಆಕ್ಷೇಪ ವ್ಯಕ್ತಪಡಿಸಿ, ಮೊಬೈಲ್ ಬಳಕೆಯನ್ನು ತಗ್ಗಿಸುವಂತೆ ಸಲಹೆ ನೀಡಿದ್ದರು. ಇದಕ್ಕೆ ನಿರಾಕರಿಸಿದ ಯುವತಿಯಿಂದ ಮೊಬೈಲ್ ಕಸಿದುಕೊಳ್ಳಲಾಗಿತ್ತು’ ಎಂದು ಮನಪಾಡ ಪೊಲೀಸರು ತಿಳಿಸಿದ್ದಾರೆ.

‘ಇದರಿಂದ ತೀವ್ರವಾಗಿ ನೊಂದ ಯುವತಿ, ವಸತಿ ಸಮುಚ್ಚಯದ 11ನೇ ಮಹಡಿಯಲ್ಲಿರುವ ತಮ್ಮ ಮನೆಯ ಬಾಲ್ಕನಿಯಿಂದ ಹಾರಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ, ಆ ಹೊತ್ತಿಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು’ ಎಂದು ವಿವರಿಸಿದ್ದಾರೆ.

‘ಇದೊಂದು ಅಪಘಾತ ಸುದ್ದಿ ಎಂದು ಸದ್ಯಕ್ಕೆ ಪ್ರಕರಣ ದಾಖಲಾಗಿದೆ. ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಆತ್ಮಹತ್ಯೆಯೇ ಎಂದು ತೀರ್ಮಾನಕ್ಕೆ ಬರಲು ವಿಚಾರಣೆ ತೀವ್ರಗೊಳಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.