ಶ್ರೀನಗರ: ಲಡಾಖ್ ಪ್ರದೇಶದಲ್ಲಿ ಬುಧವಾರ ಸಂಜೆ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.2ರಷ್ಟು ಕಂಪನ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಘಟನೆಯಲ್ಲಿ ಈವರೆಗೆ ಆಸ್ತಿಪಾಸ್ತಿ ಹಾನಿ ಸೇರಿದಂತೆ ಯಾವುದೇ ಸಾವು–ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.