ADVERTISEMENT

ಆಂಧ್ರ‍ಪ್ರದೇಶಕ್ಕೆ ಅ.16ರಂದು ಭೇಟಿ: ಕರ್ನೂಲ್‌ನಲ್ಲಿ ಮೋದಿ ಮಾತು

ಪಿಟಿಐ
Published 14 ಅಕ್ಟೋಬರ್ 2025, 14:32 IST
Last Updated 14 ಅಕ್ಟೋಬರ್ 2025, 14:32 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ 16ರಂದು (ಗುರುವಾರ) ಆಂಧ್ರ‍ಪ್ರದೇಶಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ADVERTISEMENT

ಶ್ರೀಶೈಲಂನಲ್ಲಿರುವ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಶಿವಾಜಿ ಸ್ಪೂರ್ತಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಮೋದಿ ಅವರು ಪ್ರವಾಸವನ್ನು ಆರಂಭಿಸಲಿದ್ದಾರೆ. ಬಳಿಕ ಅವರು ಕರ್ನೂಲ್‌ಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಶ್ರೀಶೈಲಂನಲ್ಲಿರುವ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮತ್ತು 52 ಶಕ್ತಿ ಪೀಠಗಳಲ್ಲಿ ಒಂದಾದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಲಿದ್ದಾರೆ.

ಕರ್ನೂಲ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿರುವ ಮೋದಿ, ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯದ ಕೈಗಾರಿಕೆ, ವಿದ್ಯುತ್ ಪ್ರಸರಣ, ರಸ್ತೆಗಳು, ರೈಲ್ವೆಗಳು, ರಕ್ಷಣಾ ಉತ್ಪಾದನೆ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ ಸುಮಾರು ₹13,430 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.