ಇಟಾನಗರ: ಅರುಣಾಚಲ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಲಿದ್ದು, ₹ 5 ಸಾವಿರ ಕೋಟಿ ಮೊತ್ತದ ವಿವಿಧ ಮೂಲಸೌಕರ್ಯ ಯೋಜನೆಗಳಿಗೆ ಹಸಿರುನಿಶಾನೆ ತೋರಲಿದ್ದಾರೆ.
ರಾಜಧಾನಿಯಲ್ಲಿರುವ ಇಂದಿರಾ ಗಾಂಧಿ ಉದ್ಯಾನದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದು, ನಂತರ ರ‍್ಯಾಲಿಯಲ್ಲಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿ ಯೋಮಿ ಜಿಲ್ಲೆಯಲ್ಲಿ ಹರಿಯುವ ಯಾರ್ಜೆಪ್ ನದಿಯಲ್ಲಿ ಟಾಟೊ–ಐ ಮತ್ತು ಎಚ್‌ಇಒ ಜಲವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.