ಲತೇಹರ್ (ಜಾರ್ಖಂಡ್): ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರದಲ್ಲಿ ನಂಬಿಕೆ ಹೊಂದಿದ್ದಾರೆ. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಅವರಿಗೆ ತಕ್ಕ ಪಾಠ ಕಲಿಸಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಜಾರ್ಖಂಡ್‌ನ ಲತೇಹರ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ‘ಇಂಡಿಯಾ’ ಮೈತ್ರಿಕೂಟದಿಂದ ಬೇರ್ಪಡದ ಕಾರಣ ಅವರನ್ನು ಜೈಲಿಗೆ ಹಾಕಲಾಗಿದೆ’ ಎಂದು ಆರೋಪಿಸಿದರು.
ನಾವು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿದ್ದೇವೆ. ಆದರೆ, ಮೋದಿ ಸರ್ವಾಧಿಕಾರದಲ್ಲಿ ನಂಬಿಕೆ ಇಟ್ಟಿದ್ದಾರೆ. ನಾವು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಹೇಳಿದರು.
ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಸಮಯದಲ್ಲಿ ನಟರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲು ಪ್ರಧಾನಿ ಮೋದಿ ಮರೆಯಲಿಲ್ಲ. ಆದರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲು ವಿಫಲರಾದರು ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.