ADVERTISEMENT

ಪ್ರತಿಭಟನೆ ದುರದೃಷ್ಟಕರ: ಮೋದಿ

ಪಿಟಿಐ
Published 17 ಡಿಸೆಂಬರ್ 2019, 2:12 IST
Last Updated 17 ಡಿಸೆಂಬರ್ 2019, 2:12 IST
ಮೋದಿ
ಮೋದಿ   

ನವದೆಹಲಿ: ‘ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ದೇಶದ ಕೆಲವೆಡೆ ಪ್ರತಿಭಟನೆ ನಡೆಯುತ್ತಿರುವುದು ದುರದೃಷ್ಟಕರ. ಜನರು ವದಂತಿಗಳಿಂದ ದೂರವಿದ್ದು, ದೇಶವನ್ನು ವಿಭಜಿಸುವ ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶವನ್ನು ವಿಫಲಗೊಳಿಸಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಮನವಿ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ಪೌರತ್ವ ಕಾಯ್ದೆಯಿಂದ ಯಾವುದೇ ಧರ್ಮದ, ಯಾವುದೇ ಭಾರತೀಯನಿಗೆ ತೊಂದರೆ ಆಗುವುದಿಲ್ಲ’ ಎಂದಿದ್ದಾರೆ.

‘ಇದು ಶಾಂತಿ, ಒಗ್ಗಟ್ಟು ಹಾಗೂ ಸಹೋದರತ್ವವನ್ನು ಕಾಯ್ದುಕೊಳ್ಳಬೆಕಾದ ಸಮಯ. ಚರ್ಚೆ, ಮಾತುಕತೆ, ಭಿನ್ನಾಭಿಪ್ರಾಯಗಳು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗಗಳು. ಆದರೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಮತ್ತು ಜನಜೀವನವನ್ನು ಅಸ್ತವ್ಯಸ್ತಗೊಳಿಸುವುದು ಪ್ರಜಾಪ್ರಭುತ್ವ ಅಲ್ಲ. ಜನರು ಸುಳ್ಳು ಸುದ್ದಿಗಳು ಮತ್ತು ವದಂತಿ ಹಬ್ಬಿಸುವುದರಿಂದ ದೂರ ಉಳಿಯಬೇಕು ಎಂದು ನಾನು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.