ADVERTISEMENT

ರೈತರ ಅಭಿವೃದ್ಧಿಗೆ ಅಡಿಪಾಯ: ಮೋದಿ

ಪಿಟಿಐ
Published 27 ಸೆಪ್ಟೆಂಬರ್ 2020, 20:04 IST
Last Updated 27 ಸೆಪ್ಟೆಂಬರ್ 2020, 20:04 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವದೆಹಲಿ: ‘ತಮ್ಮ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ, ಯಾರಿಗೆ ಬೇಕಾದರೂ ಮಾರಾಟ ಮಾಡುವ ಹಕ್ಕನ್ನು ಹೊಸ ಕೃಷಿ ಮಸೂದೆಗಳು ರೈತರಿಗೆ ನೀಡುತ್ತವೆ. ರೈತರಿಗೆ ಲಭಿಸಿದ ಈ ಶಕ್ತಿಯು ಅವರ ಅಭಿವೃದ್ಧಿಗೆ ಅಡಿಪಾಯವಾಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪುನರುಚ್ಚರಿಸಿದ್ದಾರೆ.

ಆಕಾಶವಾಣಿಯ, ‘ಮನದ ಮಾತು’ ಕಾರ್ಯಕ್ರಮದಲ್ಲಿ ಮಸೂದೆಯ ವಿಚಾರ ಪ್ರಸ್ತಾಪಿಸಿದ ಮೋದಿ, ‘ಯುಪಿಎ ಸರ್ಕಾರದ ಎರಡನೇ ಅವಧಿಯಲ್ಲಿ ಕೆಲವು ಉತ್ಪನ್ನಗಳನ್ನು ಎಪಿಎಂಸಿ ಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲಾಯಿತು. ಇದಾದ ನಂತರ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್‌, ಉತ್ತರಪ್ರದೇಶ ಮುಂತಾದ ರಾಜ್ಯಗಳ ರೈತರು ತಮಗೆ ಬೇಕಾದ ಕಡೆ ಕೃಷಿ ಉತ್ಪನ್ನಗಳನ್ನು ಮಾರಾಟಮಾಡಿ, ಆದಾಯ ಹೆಚ್ಚಿಸಿಕೊಂಡಿದ್ದಾರೆ’ ಎಂದರು.

ಹರಿಯಾಣದ ಸೋನಿಪತ್‌ನ ರೈತ ಕನ್ವರ್‌ ಚೌಹಾಣ್‌ ಹೆಸರು ಉಲ್ಲೇಖಿಸಿ, ‘ಹೆಚ್ಚಿನ ಬೆಲೆ ಲಭಿಸುತ್ತದೆ ಎಂಬ ಕಾರಣಕ್ಕೆ, ಮಂಡಿಯಿಂದ ಹೊರಗಡೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಚೌಹಾಣ್‌ ಅವರು ಪ್ರಯತ್ನಿಸುತ್ತಿದ್ದರು. ಇದರಿಂದ ಅನೇಕ ಬಾರಿ ಅವರು ಸಂಕಷ್ಟ ಎದುರಿಸಬೇಕಾಗುತ್ತಿತ್ತು. ತರಕಾರಿ ಹಾಗೂ ಹಣ್ಣು ಹಂಪಲುಗಳನ್ನು ಎಪಿಎಂಸಿ ಕಾಯ್ದೆ ವ್ಯಾಪ್ತಿಯಿಂದ ಹೊರಗಿಟ್ಟಿದ್ದರಿಂದ ಚೌಹಾಣ್‌ ಹಾಗೂ ಅವರಂಥ ಸಾವಿರಾರು ರೈತರಿಗೆ ಅನುಕೂಲವಾಗಿದೆ. ಈ ಸೌಲಭ್ಯವನ್ನು ಈಗ ಇತರ ರೈತರಿಗೂ ವಿಸ್ತರಿಸಲಾಗುತ್ತಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.