ಶಿಮ್ಲಾ: ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಭಾನುವಾರ ಅಧಿಕಾರ ಸ್ವೀಕರಿಸಿದ ಸುಖ್ವಿಂದರ್ ಸಿಂಗ್ ಸುಖ್ಖು ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ‘ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸುಖ್ವಿಂದರ್ ಸಿಂಗ್ ಸುಖ್ಖು ಅವರಿಗೆ ಅಭಿನಂದನೆಗಳು. ಹಿಮಾಚಲ ಪ್ರದೇಶದ ಅಭಿವೃದ್ಧಿಗೆ ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಕಾರವನ್ನು ಒದಗಿಸುವ ಭರವಸೆಯನ್ನು ನಾನು ನೀಡುತ್ತೇನೆ’ ಎಂದು ಅವರು ತಿಳಿಸಿದ್ದಾರೆ.
68 ಸದಸ್ಯಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗಳಿಸಿದ್ದು, ಅಧಿಕಾರ ರಚನೆ ಮಾಡಿದೆ. ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳ ರಾಜಕೀಯ ಮೇಲಾಟ ನಡೆದು ಅಂತಿಮವಾಗಿ ಸುಖ್ವಿಂದರ್ ಸಿಂಗ್ ಸುಖ್ಖು ಅವರನ್ನು ಆರಿಸಲಾಯಿತು.
ಸುಖ್ಖು ಅವರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.