ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ವ್ಯಾಸಂಗಕ್ಕೆ ಸಂಬಂಧಿಸಿದ ವಿವರಗಳನ್ನು ಬಹಿರಂಗಪಡಿಸುವಂತೆ ಕೋರಿ ಸಲ್ಲಿಕೆಯಾಗಿರುವ ನಾಲ್ಕು ಅರ್ಜಿಗಳ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಬುಧವಾರ ನಡೆಸಲಿದೆ.
ಮಾಹಿತಿ ಬಹಿರಂಗಗೊಳಿಸಲು ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ನ ಏಕ ಸದಸ್ಯ ಪೀಠ ರದ್ದುಗೊಳಿಸಿತ್ತು. ‘ಇದು ವೈಯಕ್ತಿಕ ಮಾಹಿತಿ. ಈ ವಿವರ ಕೋರಿರುವುದರ ಹಿಂದೆ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ’ ಎಂದು ಪೀಠ ಹೇಳಿತ್ತು. ಈ ತೀರ್ಪನ್ನು ಪ್ರಶ್ನಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಶಾರ್ ರಾವ್ ಗೆಡೆಲಾ ಅವರು ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸಲಿದ್ದಾರೆ. ಮಾಹಿತಿ ಹಕ್ಕು ಕಾರ್ಯಕರ್ತ ನೀರಜ್, ಎಎಪಿ ನಾಯಕ ಸಂಜಯ್ ಸಿಂಗ್, ವಕೀಲ ಮೊಹಮ್ಮದ್ ಇರ್ಷಾದ್ ಅವರು ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.