ನಾಗ್ಪುರ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ಕಲ್ಪಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಅದನ್ನು ಕಾರ್ಯರೂಪಕ್ಕೆ ತರುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಗುರುವಾರ ತಿಳಿಸಿದರು.
ದೇಶದ ಚರಿತ್ರೆಯಲ್ಲಿ ಮೋದಿ ಅಧಿಕಾರವಾಧಿಯ 11 ವರ್ಷಗಳಿಗೆ ಪ್ರಾಮುಖ್ಯ ಸ್ಥಾನವಿದೆ. ಎಲ್ಲ ವಲಯಗಳಲ್ಲೂ ಪ್ರಗತಿ ಸಾಧಿಸುವ ಮೂಲಕ 60 ವರ್ಷಗಳಲ್ಲಿ ಸಾಧ್ಯವಾಗದಿದ್ದ ಪ್ರಗತಿಯನ್ನು ಈ ಅವಧಿಯಲ್ಲಿ ಸಾಧಿಸಲಾಗಿದೆ ಎಂದು ಅವರು ಹೇಳಿದರು.
ನಾಗ್ಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಸಕ್ತ ವರ್ಷದ ಅಂತ್ಯದೊಳಗೆ ದೇಶದಲ್ಲಿ ಸರಕು ಸಾಗಣೆ ವೆಚ್ಚವು ಶೇ 9ರಷ್ಟಕ್ಕೆ ತಗ್ಗಲಿದೆ. ಇದು ರಪ್ತು ವಹಿವಾಟಿಗೆ ಉತ್ತೇಜನ ನೀಡಲಿದ್ದು, ವ್ಯಾಪಾರ ಹಾಗೂ ಕೈಗಾರಿಕೆಗಳ ಬೆಳವಣೆಗೆಗೆ ಸಹಾಯಕವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.