
ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಅವರು, ಜಲ ಜೀವನ್ ಮಿಷನ್ ಬಗ್ಗೆ ತುತ್ತೂರಿ ಉದುತ್ತಿದ್ದಾರೆ. ಆದರೆ, ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟವರ ಬಗ್ಗೆ ಮೌನವಾಗಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
‘ದೇಶದ ಜನರಿಗೆ ಕನಿಷ್ಠ ಶುದ್ಧ ನೀರು ಮತ್ತು ಶುದ್ಧ ಗಾಳಿ ಕಲ್ಪಿಸಲು ಮೋದಿ ಸರ್ಕಾರ ವಿಫಲವಾಗಿದೆ. ಜಲಜೀವನ ಮಿಷನ್ ಮತ್ತು ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಅಬ್ಬರದ ಪ್ರಚಾರ ಮಾಡುತ್ತಿರುವ ಬಿಜೆಪಿಯು, ಇಂದೋರ್‌ನ ಜನರ ಸಾವಿನ ವಿಷಯದಲ್ಲಿ ಮೌನ ವಹಿಸಿರುವುದೇಕೆ, ದೇಶದ ಸ್ವಚ್ಛ ನಗರಿ ಎಂಬ ಗರಿಮೆಗೆ ಪಾತ್ರವಾಗಿರುವ ಇಂದೋರ್‌ನಲ್ಲೇ ಜನರಿಗೆ ಕುಡಿಯಲು ಶುದ್ಧ ನೀರು ಸಿಗದಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಕಳೆದ 11 ವರ್ಷಗಳಿಂದ ದೇಶದ ಜನರು ವಂಚನೆ, ಸುಳ್ಳು ಭರವಸೆಯ ಸುದೀರ್ಘ ಭಾಷಣ ಕೇಳಿ ಬೇಸತ್ತಿದ್ದಾರೆ. ದುರಾಡಳಿತ, ಭ್ರಷ್ಟಾಚಾರದಿಂದ ಜನಸಾಮಾನ್ಯರು ತತ್ತರಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.