ಲಖನೌ: ಮುಸ್ಲಿಂ ಮಹಿಳೆಯರ ಸಬಲೀಕರಣವಾಗಬೇಕೆಂಬ ಪ್ರವಾದಿ ಮೊಹಮ್ಮದರ ಆಶಯವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈಡೇರಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದ 11ನೇ ವರ್ಷಾಚರಣೆ ಪ್ರಯುಕ್ತ ಬಿಜೆಪಿ ಅಲ್ಪಸಂಖ್ಯಾತರ ಘಟಕವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.
‘ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮುಸ್ಲಿಂ ಮಹಿಳೆಯರ ಹೆಸರಿಗೆ ಒಂದು ಕೋಟಿ ಮನೆಗಳನ್ನು ನೋಂದಾಯಿಸಲಾಗಿದೆ. ಆಯುಷ್ಮಾನ್ ಯೋಜನೆಯಡಿ ದೇಶದಾದ್ಯಂತ 21 ಕೋಟಿ ಮಂದಿಗೆ ₹5 ಲಕ್ಷ ವಿಮಾ ಮೊತ್ತವನ್ನು ಒದಗಿಸಲಾಗಿದೆ. ಮುದ್ರಾ ಯೋಜನೆಯಡಿ ಮುಸ್ಲಿಂ ಧರ್ಮದ ಸಹೋದರ, ಸಹೋದರಿಯರು ಶೇ 36ರಷ್ಟು ಸೌಲಭ್ಯ ಪಡೆದಿದ್ದಾರೆ. 2 ಕೋಟಿ ಮಂದಿಗೆ ಉಜ್ವಲ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ತ್ರಿವಳಿ ತಲಾಖ್ ನಿಷೇಧಿಸಲಾಗಿದೆ’ ಎಂದು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.