ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಸುತ್ತಲೇ ಇರುವ ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ‘ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರ ದಾಖಲೆ ನಿರ್ಮಿಸಿದೆ’ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್‌ಗೆ ಈ ವರ್ಷ ಲೀಟರ್‌ಗೆ ದಾಖಲೆಯ ₹23.53 ರೂಪಾಯಿಯಷ್ಟು ಹೆಚ್ಚಳವಾಗಿದೆ ಎಂಬ ಮಾಧ್ಯಮ ವರದಿಯೊಂದನ್ನು ಟ್ಯಾಗ್ ಮಾಡಿದ್ದಾರೆ.
‘ಜನರಿಗೆ ತೊಂದರೆ ಕೊಡುವುದರಲ್ಲಿ ಮೋದಿ ಸರ್ಕಾರ ದೊಡ್ಡ ದಾಖಲೆ ನಿರ್ಮಿಸಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ನಿರುದ್ಯೋಗ ಸೃಷ್ಟಿಯಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ. ಒಂದು ವರ್ಷದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪೆಟ್ರೋಲ್ ದರ ಏರಿಕೆಯಾಗಿದೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ಸಹ ಇದೇ ಮಾಧ್ಯಮ ವರದಿಯನ್ನು ಟ್ಯಾಗ್ ಮಾಡಿ ‘ಅಚ್ಛೇ ದಿನ್’ ಎಂದು ಕುಟುಕಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.