ADVERTISEMENT

ಬಿಜೆಪಿಯಿಂದ ಬಾಯಿ ಮಾತಿನಲ್ಲಿ ಅಂಬೇಡ್ಕರ್ ಜಪ: ಖರ್ಗೆ

ಪಿಟಿಐ
Published 14 ಏಪ್ರಿಲ್ 2025, 16:07 IST
Last Updated 14 ಏಪ್ರಿಲ್ 2025, 16:07 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ‘ನರೇಂದ್ರ ಮೋದಿ ಸರ್ಕಾರವು ಕೇವಲ ಬಾಯಿ ಮಾತಿನಲ್ಲಿ  ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ಸ್ಮರಿಸುತ್ತದೆ. ಅವರ ಆಶಯಗಳ ಈಡೇರಿಕೆಗೆ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲ. ಬಿಜೆಪಿ–ಆರ್‌ಎಸ್‌ಎಸ್‌ ಅಂಬೇಡ್ಕರ್ ಅವರ ಶತ್ರುಗಳು‘ ಎಂದು ಕಾಂಗ್ರೆಸ್‌ ಸೋಮವಾರ ಆರೋಪಿಸಿದೆ.

ಅಂಬೇಡ್ಕರ್‌ ಅವರ 134ನೇ ಜಯಂತಿ ದಿನ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ‘ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಸಾಮಾನ್ಯವಾಗಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಗೌರವ ನಮನ ಸಲ್ಲಿಸಲಾಗುತ್ತದೆ. ಆದರೆ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಮನ ಸಲ್ಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಈ ಬದಲಾವಣೆ ಮಾಡಲಾಗಿದೆ. ಆದರೂ ಅವರು ಸರಿಯಾದ ಸಮಯಕ್ಕೆ ತಲುಪಿಲ್ಲ’ ಎಂದು ಹೇಳಿದರು.

‘ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದವರು. ಆದರೆ, ಹಿಂದುಳಿದ ವರ್ಗ ಮತ್ತು ದಲಿತರ ಮೇಲೆ ದೌರ್ಜನ್ಯಗಳು ನಡೆದಾಗ ಪ್ರಧಾನಿ ಮೌನ ವಹಿಸುತ್ತಾರೆ. ಮೋದಿ ಅವರು ಸಂವಿಧಾನವನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಾರೆ ಎಂಬ ಸಂಕೇತ ಇದು‘ ಎಂದು ದೂರಿದರು.

ADVERTISEMENT

’ಬಿಜೆಪಿಯು ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಜನರಿಗೆ ಸತ್ಯ ಏನು ಎಂದು ತಿಳಿದಿದೆ ಎಂದು ಹೇಳಿದರು.

‘ದೇಶದಾದ್ಯಂತ ಜಾತಿಗಣತಿ ನಡೆಸುವ ಮತ್ತು ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದವರಿಗೆ ಮೀಸಲಾತಿ ಅನುಷ್ಠಾನ ಮಾಡುವ ಅಗತ್ಯವಿದೆ‌‘ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.