ADVERTISEMENT

‘ಮೋದಿ ಹೇ ತೋ ಮೆಹೆಂಗಾಯಿ ಹೈ’: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಪಿಟಿಐ
Published 1 ಜನವರಿ 2022, 16:15 IST
Last Updated 1 ಜನವರಿ 2022, 16:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಮತ್ತು ಹಣದುಬ್ಬರ ದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಿದೆ ಎಂದು ಟೀಕಿಸಿದೆ.

‘ಮೋದಿ ಹೇ ತೋ ಮೆಹೆಂಗಾಯಿ ಹೈ (ಮೋದಿ ಇದ್ದಲ್ಲಿ ಹಣದುಬ್ಬರ ಇದೆ)’ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನೇತ್ ವ್ಯಂಗ್ಯವಾಡಿದ್ದಾರೆ. ಸರಕು ಮತ್ತು ಸೇವಾ ತೆರಿಗೆಯನ್ನು ‘ಗಬ್ಬರ್ ಸಿಂಗ್ ಟ್ಯಾಕ್ಸ್’ ಎಂದು ಅವರು ಟೀಕಿಸಿದ್ದಾರೆ.

ಆರ್ಥಿಕ ಹಿಂಜರಿತ, ನಿರುದ್ಯೋಗ ಹಾಗೂ ಹಣದುಬ್ಬರವೇ ಬಡ ಜನರಿಗೆ ಮೋದಿ ಸರ್ಕಾರದ ಹೊಸ ವರ್ಷದ ಕೊಡುಗೆ ಎಂದು ಅವರು ಹೇಳಿದ್ದಾರೆ.

ADVERTISEMENT

ಕಾಂಗ್ರೆಸ್ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ ದೇಶದಲ್ಲಿ ನಿರುದ್ಯೋಗ ಪ್ರಮಾಣ ಶೇ 2ರಷ್ಟಿತ್ತು. 2021ರಲ್ಲಿ ಶೇ 10ಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.