ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಪಿಟಿಐ ಚಿತ್ರ
ನವದೆಹಲಿ: ಜನ ಶಕ್ತಿಯೇ ಸರ್ವಶ್ರೇಷ್ಠ. ಅಭಿವೃದ್ಧಿ ಗೆಲುವು ಸಾಧಿಸುತ್ತದೆ. ಈ ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿ ಜನತೆಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ನಿಮ್ಮ ಆಶೀರ್ವಾದ ಪಡೆಯಲು ನಾವು ವಿನಮ್ರರಾಗಿದ್ದೇವೆ. ದೆಹಲಿಯನ್ನು ಅಭಿವೃದ್ಧಿಪಡಿಸುವತ್ತ, ಜನರ ಜೀವನವನ್ನು ಸುಧಾರಿಸುವ ದೃಷ್ಟಿಕೋನದಿಂದ ಸ್ಥಿರ ಆಡಳಿತ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ವಿಕಸಿತ ಭಾರತ ನಿರ್ಮಾಣಕ್ಕೆ ದೆಹಲಿ ಪ್ರಮುಖ ಪಾತ್ರವಹಿಸಲಿದೆ. ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಲಿದೆ. ಈ ನಿಟ್ಟಿನಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶವು ಹೆಮ್ಮೆಪಡುವಂತಿದೆ. ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾದ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.