ಅಹಮದಾಬಾದ್(ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಹಮದಾಬಾದ್‌ನ ಹಂಸಲ್‌ಪುರದಲ್ಲಿರುವ ಸುಜುಕಿ ಕಂಪನಿಯ ಮೋಟಾರ್ ತಯಾರಿಕಾ ಘಟಕ 'ಇ-ವಿಟಾರಾ'ವನ್ನು ಉದ್ಘಾಟಿಸಿದರು.
ಭಾರತದಲ್ಲಿಯೇ ತಯಾರಿಸಲಾದ ಬಿಇವಿಗಳನ್ನು ಯುರೋಪ್ ಮತ್ತು ಜಪಾನ್‌ನಂತಹ ಮುಂದುವರಿದ ರಾಷ್ಟ್ರಗಳ ಮಾರುಕಟ್ಟೆಗಳು ಸೇರಿದಂತೆ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುತ್ತದೆ. ಈ ಮೈಲಿಗಲ್ಲಿನೊಂದಿಗೆ, ಭಾರತವು ಈಗ ಸುಜುಕಿಯ ವಿದ್ಯುತ್ ವಾಹನಗಳ ಜಾಗತಿಕ ಉತ್ಪಾದನಾ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ ಎಂದು ವರದಿ ತಿಳಿಸಿದೆ.
ಈ ಉಪಕ್ರಮವು ಭಾರತವು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮುವುದನ್ನು ಒತ್ತಿಹೇಳುತ್ತದೆ. ಪ್ರಧಾನ ಮಂತ್ರಿಯವರ ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ ಭಾರತಕ್ಕೆ ಬದ್ಧತೆಯನ್ನು ಮುನ್ನಡೆಸುತ್ತವದೆ ಎಂದು ವರದಿ ತಿಳಿಸಿದೆ.
ಹಸಿರು ಇಂಧನ ಕ್ಷೇತ್ರದಲ್ಲಿ ಆತ್ಮನಿರ್ಭರತೆ ಸಾಧಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯಾಗಿ, ಗುಜರಾತ್‌ನ ಟಿಡಿಎಸ್ ಲಿಥಿಯಂ-ಐಯಾನ್ ಬ್ಯಾಟರಿ ಸ್ಥಾವರದಲ್ಲಿ ಸ್ಥಳೀಯವಾಗಿ ಹೈಬ್ರಿಡ್ ಬ್ಯಾಟರಿ ಉತ್ಪಾದನೆಗೆ ಚಾಲನೆ ನೀಡಲಿದ್ದಾರೆ.
ಇದಕ್ಕೂ ಮುನ್ನ, ಸೋಮವಾರ ಮೋದಿ ₹5,400 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು.
ಅಹಮದಾಬಾದ್‌ನಲ್ಲಿ ರೋಡ್ ಶೋ ನಡೆಸಿದ್ದ ಮೋದಿ, ಮೇಘಸ್ಫೋಟ ಮತ್ತು ಸೇತುವೆ ಕುಸಿತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.