ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಮೋದಿ ಅವರು ಹೆಚ್ಚು ಮಾತನಾಡುತ್ತಾರೆ, ಕಡಿಮೆ ಕೆಲಸ ಮಾಡುತ್ತಾರೆ’ ಎಂದು ಆರೋಪಿಸಿದರು.
ಅವರಿಗೂ ಹಿಂದೆ ಅಧಿಕಾರದಲ್ಲಿದ್ದ ಮನಮೋಹನ ಸಿಂಗ್ ಅವರು ‘ಕಡಿಮೆ ಮಾತನಾಡಿ, ಹೆಚ್ಚು ಕೆಲಸ ಮಾಡುತ್ತಿದ್ದರು’ ಎಂದು ಖರ್ಗೆ ಶನಿವಾರ ಸ್ಮರಿಸಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ಆದ ಅಭಿವೃದ್ಧಿ ಕೆಲಸಗಳ ಪೈಕಿ ಶೇ 10ರಷ್ಟನ್ನೂ ಮೋದಿ ಅವರು 11 ವರ್ಷಗಳಲ್ಲಿ ಮಾಡಿಲ್ಲ ಎಂದು ದೂರಿದರು.
‘ಮನಮೋಹನ ಸಿಂಗ್ ಫೆಲೋ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂಸತ್ತಿನ ಅಧಿವೇಶನ ನಡೆಯುವಾಗ ಸಿಂಗ್ ಅವರು ಸದಾ ಕಲಾಪದಲ್ಲಿ ಹಾಜರಿರುತ್ತಿದ್ದರು. ಸದಸ್ಯರು ಕೇಳುತ್ತಿದ್ದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದರು. ವಿರೋಧ ಪಕ್ಷಗಳಿಗೆ ಪ್ರತಿಕ್ರಿಯಿಸುತ್ತಿದ್ದರು. ಸಂವಾದದಲ್ಲಿ ಭಾಗವಹಿಸುತ್ತಿದ್ದರು. ಆದರೆ, ಈಗಿನ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ತನ್ನ ಘನತೆಗೆ ತಕ್ಕದ್ದಲ್ಲ ಎಂದು ಭಾವಿಸಿದ್ದಾರೆ’ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.