ADVERTISEMENT

VP ಅಭ್ಯರ್ಥಿಯಾಗಿ ಆಯ್ಕೆಯಾದ ಬೆನ್ನಲ್ಲೇ ಮೋದಿ ಭೇಟಿ ಮಾಡಿದ ಸಿ.ಪಿ.ರಾಧಾಕೃಷ್ಣನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಆಗಸ್ಟ್ 2025, 11:54 IST
Last Updated 18 ಆಗಸ್ಟ್ 2025, 11:54 IST
   

ಬೆಂಗಳೂರು: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿ ನಾಮ ನಿರ್ದೇಶನವಾದ ಬೆನ್ನಲ್ಲೇ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಸೋಮವಾರ) ಭೇಟಿಯಾಗಿದ್ದಾರೆ.

ಭೇಟಿಯ ಚಿತ್ರಗಳನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.

'ಸಿ.ಪಿ.ರಾಧಾಕೃಷ್ಣನ್ ಅವರ ದೀರ್ಘ ಕಾಲದ ಸಾರ್ವಜನಿಕ ಸೇವೆ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅನುಭವವು ನಮ್ಮ ರಾಷ್ಟ್ರದ ಆಡಳಿತಕ್ಕೆ ಸಹಕಾರಿಯಾಗಲಿದೆ. ಸದಾ ಅವರು ನಿರ್ವಹಿಸುವ ಅದೇ ಸಮರ್ಪಣೆ ಮತ್ತು ಸಂಕಲ್ಪದೊಂದಿಗೆ ರಾಷ್ಟ್ರಕ್ಕೆ ಸಲ್ಲಿಸುತ್ತಿರುವ ಸೇವೆ ಮುಂದುವರಿಯಲಿ' ಎಂದು ಮೋದಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ADVERTISEMENT

ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ರಾಧಾಕೃಷ್ಣನ್ ಅವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಯಿತು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದರು.

ಜಗದೀಪ್ ಧನಕರ್ ಅವರು ಕಳೆದ ತಿಂಗಳು ರಾಜೀನಾಮೆ ನೀಡಿದ್ದರಿಂದ ಉಪರಾಷ್ಟ್ರಪತಿ ಹುದ್ದೆ ತೆರವಾಗಿತ್ತು. ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9ರಂದು ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ಆಗಸ್ಟ್ 22 ಕೊನೆಯ ದಿನಾಂಕ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.