ನರೇಂದ್ರ ಮೋದಿ, ಜಾರ್ಜಿಯಾ ಮೆಲೋನಿ
(ಚಿತ್ರ ಕೃಪೆ: X/@GiorgiaMeloni)
ನವದೆಹಲಿ: ಕೆನಾಡದಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾಗಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.
ಮೋದಿ-ಮೆಲೋನಿ ಭೇಟಿಯ ಚಿತ್ರ ಹಾಗೂ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಹೆಚ್ಚಿನ ಪ್ರತಿಕ್ರಿಯೆ ದಾಖಲಾಗಿವೆ.
ಮೋದಿ ಜತೆಗಿನ ಚಿತ್ರವನ್ನು ಮೆಲೋನಿ ತಮ್ಮ ಅಧಿಕೃತ 'ಎಕ್ಸ್' ಖಾತೆಯಲ್ಲಿ ಹಂಚಿದ್ದಾರೆ. ಅಲ್ಲದೆ ಭಾರತ ಹಾಗೂ ಇಟಲಿ ನಡುವಣ ಸ್ನೇಹ ಬಾಂಧವ್ಯದ ಕುರಿತು ಉಲ್ಲೇಖಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, 'ನೀವು ಹೇಳಿರುವುದನ್ನು ಸಂಪೂರ್ಣವಾಗಿ ಒಪ್ಪುತ್ತೇನೆ. ಇಟಲಿಯೊಂದಿಗಿನ ಭಾರತದ ಬಾಂಧವ್ಯ ಮತ್ತಷ್ಟು ಬಲಿಷ್ಠಗೊಳ್ಳಲಿದೆ. ಜನರಿಗೆ ಇದರ ಪ್ರಯೋಜನ ಸಿಗಲಿದೆ' ಎಂದು ಹೇಳಿದ್ದಾರೆ.
ಮಾತುಕತೆ ವೇಳೆ 'ಯೂ ಆರ್ ದಿ ಬೆಸ್ಟ್' ಎಂದೂ ಮೋದಿ ಅವರನ್ನು ಮೆಲೋನಿ ಗುಣಗಾನ ಮಾಡಿದ್ದಾರೆ.
ಈ ಹಿಂದೆಯೂ ಮೋದಿ ಹಾಗೂ ಮೆಲೋನಿ ನಡುವಣ ಭೇಟಿಯು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.