ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೊನಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರೊಂದಿಗೆ ದೂರವಾಣಿಯಲ್ಲಿ ಬುಧವಾರ ಮಾತುಕತೆ ನಡೆಸಿದರು.
‘ಪ್ರಧಾನಿ ಜಾರ್ಜಿಯಾ ಮೆಲೊನಿ ಅವರೊಂದಿಗೆ ಉತ್ತಮ ಸಂಭಾಷಣೆ ನಡೆಸಿದೆ. ಭಾರತ– ಇಟಲಿ ಕಾರ್ಯತಂತ್ರದ ಪಾಲುದಾರಿಕೆಯನ್ನು ಇಮ್ಮಡಿಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ. ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಶೀಘ್ರವಾಗಿ ಕೊನೆಗೊಳಿಸಬೇಕೆಂಬ ಕುರಿತೂ ಮಾತನಾಡಿದೆವು’ ಎಂದು ಮೋದಿ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ಭಾರತ–ಯುರೋಪ್ ಒಕ್ಕೂಟದ ವ್ಯಾಪಾರ ಒಪ್ಪಂದ ಮತ್ತು ‘ಭಾರತ– ಮಧ್ಯಪ್ರಾಚ್ಯ– ಯುರೋಪ್ ಆರ್ಥಿಕ ಕಾರಿಡಾರ್’ (ಐಎಂಇಇಸಿ) ಅನುಷ್ಠಾನದ ಕುರಿತು ಬೆಂಬಲ ನೀಡಿದ್ದಕ್ಕಾಗಿ ಮೆಲೊನಿ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದೂ ಹೇಳಿದ್ದಾರೆ.
ಭಾರತ ಮತ್ತು ಯುರೋಪ್ ಒಕ್ಕೂಟವು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್‌ಟಿಎ) ಇನ್ನಷ್ಟು ಬಲಗೊಳಿಸುವತ್ತ ಮುಂದುವರಿದಿವೆ. ಉಭಯ ದೇಶಗಳ ನಾಯಕರು ದೆಹಲಿಯಲ್ಲಿ ಈ ಬಗ್ಗೆ 13ನೇ ಸುತ್ತಿನ ಮಾತುಕತೆಯನ್ನು ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.